ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆಮಾಡಿಕೊಳ್ಳಲಾಗತ್ತದೆ.
ಹುದ್ದೆಗಳ ವಿವರ : 47
ಸಂಗ್ರಹಣೆ ಸಲಹೆಗಾರ : 9
ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ : 10
ಪರಿಸರ ಸಲಹೆಗಾರ : 10
ಸಾಮಾಜಿಕ ಅಭಿವೃದ್ಧಿ ಸಲಹೆಗಾರ : 7
ಹಣಕಾಸು ಸಲಹೆಗಾರ : 11
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 75000/- ರಿಂದ 150000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments