ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ, ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದ 6 ಬೆರಳಚ್ಚುಗಾರರು ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31/10/2023 ದಿನಾಂಕದೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ .
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ,
ಕಂದಾಯ ಭವನ, 7ನೇ ಮಹಡಿ, ಕೇಜಿರಸ್ತೆ ಬೆಂಗಳೂರು-560009
1. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯ ಶೀಘ್ರಲಿಪಿ ಪ್ರೌಢದರ್ಜೆ (ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಈ ಕೆಳಗಿನಂತೆ ವರ್ಗಾವಾರು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
- ಸಾಮಾನ್ಯ ವರ್ಗ : 35 ವರ್ಷಗಳು
- ಪ.ಜಾ/ಪ.ಪಂ/ಪ್ರ-1 : 40 ವರ್ಷಗಳು
- 2ಎ, 2ಬಿ, 3ಎ, 3ಬಿ : 38 ವರ್ಷಗಳು
ವೇತನ ಶ್ರೇಣಿ: ರೂ. 21400-500-22400-550-24600-600-27000-650-29600-750- 32600-850-36000-950-39800-1100-42000
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments