ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ 41 ಉಪ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿನಾಂಕ 18/03/2023 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು, ಕೆ.ಎಸ್.ಎಫ್.ಸಿ.ಭವನ, # 1/1,
ತಿಮ್ಮಯ್ಯ ರಸ್ತೆ, ದಂಡು ರೇಲ್ವೆ ನಿಲ್ದಾಣ ಬಳಿ, ಬೆಂಗಳೂರು- 560052
ಹುದ್ದೆಗಳ ವಿವರ : 41
ಉಪ ವ್ಯವಸ್ಥಾಪಕರ ಕಾನೂನು : 18
ಉಪ ವ್ಯವಸ್ಥಾಪಕರ ತಾಂತ್ರಿಕ : 11
ಉಪ ವ್ಯವಸ್ಥಾಪಕರ ಹಣಕರು ಮತ್ತು ಲೆಕ್ಕಪತ್ರ : 12
ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 52,650/- ರಿಂದ 97,100/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments