ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕಾರನಾಟಕ ರಾಜ್ಯ ಮೀಸಲು ಪಡೆಯಲ್ಲಿ ಖಾಲಿ ಇರುವ464 ಅಡುಗೆಯವರು, ಕ್ಷೌರಿಕ, ದೋಭಿ ಮತ್ತು ಕಸಗುಡಿಸುವವರ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ30/08/2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಬ್ಬ ಅಭ್ಯರ್ಥಿವು ಒಂದು ಹುದ್ದೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಕರ್ನಾಟಕದ ವಿವಿಧ ಜಿಲ್ಲೆಳಲ್ಲಿ ನೇಮಕ ಮಾಡಿ ಕೊಳ್ಳಲಾಗುತ್ತದೆ.
ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರ: 464
* ಬೆಂಗಳೂರು : 25
* ಮೈಸೂರು : 30
* ಕಲಬುರಗಿ : 25
* ಮಂಗಳೂರು : 46
* ಶಿಗ್ಗಾವಿ : 50
* ತುಮಕೂರು : 74
* ಕಲ್ಯಾಣ ಕರ್ನಾಟಕ : 214
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹100/-
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 30/08/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು. 30 ವರ್ಷಗಳನ್ನೂ ಮೀರಿರಬಾರದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,600/- ರಿಂದ 32,600/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments