ಕರ್ನಾಟಕದಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2024 ರಾತ್ರಿ 11:59ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 04/03/2024 ಬೆಳಿಗ್ಗೆ 11:00
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/05/2024 ರಾತ್ರಿ 11:59
- ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಮಾರ್ಚ್ 4ರಿಂದ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು, ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ದಿನಾಂಕವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
* - ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ದಿನಾಂಕ 04-05-2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು, ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಕೋರಿದ್ದರಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು 15-05-2024 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವಯಿಸುವ ಕೊನೆಯ ದಿನಾಂಕ 05/18/2024.
- ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು15-05-2024 ರ ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19-09-2024 ಹಾಗೂ ಕೊನೆಯ ದಿನಾಂಕ 28-09-2024ರ ವರೆಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ. ಆನ್ ಲೈನ್ ಮೂಲಕ ಶುಲ್ಕ ಪಾವತಿಸುವ ಕೊನೆಯ ದಿನಾಂಕ 29/09/2024.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 750/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 21,400/- ರಿಂದ 42,000/- ವರೆಗೆ ವೇತನವನ್ನು ಪಡೆಯಲ್ಲಿದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಈ ಹುದ್ದೆಗಳ ಪರೀಕ್ಷೆಗಾಗಿ ನಿಗದಿಪಡಿಸಿದ ಪಠ್ಯಕ್ರಮ ಈ ಕೆಳಗಿನಂತಿದೆ:





Comments