ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:16 ಡಿಸೆಂಬರ್ 2019

ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು) ಇಲ್ಲಿ ಖಾಲಿ ಇರುವ ಜ್ಯೂನಿಯರ್ ಮೆಂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 31,2019 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 31,2019ರೊಳಗೆ ತಲುಪಿಸಬೇಕಿರುತ್ತದೆ. ಕಚೇರಿಯ ವಿಳಾಸ: ನಿರ್ದೇಶಕರು, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ, ಚಿನ್ನಸ್ವಾಮಿ ಸ್ಟೇಡಿಯಂ ಹತ್ತಿರ, ಕಸ್ತೂರಬಾ ರಸ್ತೆ, ಅಂಬೇಡ್ಕರ್ ವೀದಿ, ಬೆಂಗಳೂರು-560001.(The Director, Visvesvaraya Industrial & Technological Museum, Kasturba Road, Bangalore – 560 001)
Application Start Date: 16 ಡಿಸೆಂಬರ್ 2019
Application End Date: 31 ಡಿಸೆಂಬರ್ 2019
Qualification: ವಿಜ್ಞಾನ ಅಥವಾ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಜ್ಯೂನಿಯರ್ ಮೆಂಟರ್ ಹುದ್ದೆಗಳಿಗೆ ಯಾವುದೇ ಗರಿಷ್ಟ ವಯೋಮಿತಿ ನಿಗದಿಪಡಿಸಿಲ್ಲ ನಿವೃತ್ತಿ ಹೊಂದಿದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ.
Pay Scale: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಂ ಬೆಂಗಳೂರು) ನೇಮಕಾತಿಯ ಜ್ಯೂನಿಯರ್ ಮೆಂಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,





Comments