ಕರ್ನಾಟಕ ರಾಜ್ಯ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿನ Group-C 155 ಹುದ್ದೆಗಳ ಅಧಿಸೂಚನೆ ಇದೀಗ ಪ್ರಕಟ
Published by: Yallamma G | Date:27 ಜೂನ್ 2022
ಕರ್ನಾಟಕ ಲೋಕಸೇವಾ ಆಯೋಗದಿಂದ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿನ ದ್ವಿತೀಯ ದರ್ಜೆಯ ಸಹಾಯಕ ಗ್ರೂಪ್ ಸಿ ವೃಂದದ ಒಟ್ಟು 155 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 11/07/2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 10/08/2022 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತೀಯ ನಾಗರೀಕ ನಾಗಿರಬೇಕು. ಈ ದ್ವಿತೀಯ ದರ್ಜೆಯ ಬ್ಯಾಕ್ ಲಾಗ್ ಹುದ್ದೆಗಳು ಪಿಂಚಣಿ ರಹಿತ ವಾಗಿರುತ್ತವೆ.
No. of posts: 155
Application Start Date: 11 ಜುಲೈ 2022
Application End Date: 10 ಆಗಸ್ಟ್ 2022
Work Location: ಕರ್ನಾಟಕ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಯಸ್ಸು ಮತ್ತು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC, ITI, Diploma, HSC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಧವಿದ್ಯಾಲಯದಿಂದ ಹೊಂದಿರಬೇಕು. ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ತೆಗೆದುಕೊಂಡು ಉತ್ತೀರ್ಣರಾಗಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ21,400 ರಿಂದ 42,000 ರವರೆಗೆ ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments