ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ವ್ಯಾಪಾರ ಅಭಿವೃದ್ಧಿ ಸಹಾಯಕ ಮತ್ತು ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗೆ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ
| Date:27 ಜುಲೈ 2019

ಕರೂರ್ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ ವ್ಯಾಪಾರ ಅಭಿವೃದ್ಧಿ ಸಹಾಯಕ ಮತ್ತು ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಜಾಲತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕ ಅಕ್ಟೋಬರ್ 23,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
Application Start Date: 27 ಜುಲೈ 2019
Application End Date: 23 ಅಕ್ಟೋಬರ್ 2019
Qualification: ಯಾವುದೇ ಪದವಿಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಜೂನ್ 30,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂಪಾಯಿ 18,000 /- ವೇತನ ನಿಗದಿಪಡಿಸಲಾಗಿದೆ





Comments