ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ 100 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಆರಂಭ

ಕರ್ನಾಟಕ ಸರ್ಕಾರವು ನಡೆಸುತ್ತಿರುವ ತೃತೀಯ ಆರೈಕೆ ಸ್ವಾಯತ್ತ ಸಂಸ್ಥೆಯಾಗಿರುವ, ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಮೈಸೂರು ಮತ್ತು ಕಲಬುರಗಿಯಲ್ಲಿ ಶಾಖೆ ಹೊಂದಿರುವ ಶ್ರೀ ಜಯದೇವ್ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 100 ಸ್ಟಾಪ್ ನರ್ಸ್ (ಶುಶ್ರೂಷಾಧಿಕಾರಿ) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕೊನೆಯ ದಿನಾಂಕ : 02/11/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಶ್ರೀ ಜಯದೇವ ಹೃದ್ರೋಗ ವಿಜ್ಞಾನ & ಸಂಶೋಧನಾ ಸಂಸ್ಥೆ ಬೆಂಗಳೂರು ಇಲ್ಲಿನ 100 ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿಗೆ KEA ಯಿಂದ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿತ್ತು, ಆದರೆ ಇದೀಗ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.
* ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾದ ಅಧಿಸೂಚನೆಯ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿ ಹಾಗೂ ಪ್ರಾಕ್ಟಿಕಲ್ ಮುಗಿಸಿರಬೇಕು.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments