ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶೀಘ್ರದಲ್ಲಿಯೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2600 ಕ್ಕೂ ಅಧಿಕ ಹುದ್ದೆಗಳ ನೇರನೇಮಕಾತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇಲಾಖೆಗಳಲ್ಲಿಖಾಲಿ ಇರುವ 2609ಸಹಾಯಕ, ಗ್ರಂಥಪಾಲಕ, ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಕಿರಿಯ ಸಹಾಯಕ, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದೆಂದು ಎಂದು ತಿಳಿಸಿದೆ.
ಈ ಕುರಿತು ಸವಿವರವಾದ ಮಾಹಿತಿಯನ್ನು KPSCVaani App ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ......
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 2609
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ : 44
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ : 750
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ : 38
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ : 1752
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ : 25
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments