KEAಯಿಂದ ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವಕಲ್ಯಾಣ ಕರ್ನಾಟಕ ವೃಂದದ 18 ಮತ್ತು ಉಳಿಕೆ ಮೂಲ ವೃಂದದ 6 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡ ತದನಂತರ ಅರ್ಜಿಸಲ್ಲಿಸಬಹುದಾಗಿರತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ 18 ಮತ್ತು ಉಳಿಕೆ ಮೂಲ ವೃಂದದ 6 ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 25 ಆಗಸ್ಟ್ 2024 ರಂದು ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 30-ಆಗಸ್ಟ್-2024ರ ವರೆಗೆ ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 05-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-08-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 27-08-2024
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ : 03 ಮತ್ತು 04.10.2024
ಹದ್ದೆಗಳ ವಿವರ : 24
ಸಹಾಯಕ ಪ್ರಾಧ್ಯಾಪಕ (NHK) : 6
ಸಹಾಯಕ ಪ್ರಾಧ್ಯಾಪಕ (HK) : 18
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 2000/-
SC/ ST/ ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ : 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 57,700-1,82,400 ರೂಗಳವರೆಗೆ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments