ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆಯ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
1). ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳ (ಪ್ರವರ್ಗ-2ಎ / 2ಬಿ, 3ಎ / 3ಬಿ) ರ ಅಭ್ಯರ್ಥಿಗಳಿಗೆ 2000/-
2). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 1000/-
3). ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ಇದೆ. ( ಶೇ 40 ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹೊಂದಿರುವವರು)
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 22 ವರ್ಷಗಳು ತುಂಬಿರ ತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಎ) ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 40 ವರ್ಷಗಳು.
ಬಿ) ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು.
ಸಿ) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷಗಳು.
ಯುಜಿಸಿ ವೇತನ ಶ್ರೇಣಿ57700/- ರಿಂದ 182400/-
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments