ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ 741 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದ ಇಲ್ಲಿ ಖಾಲಿ ಇರುವ 741 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಸರಕಾರದ ಈ ಕೆಳಗಿನ 5 ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
(ಎ) ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ,
(ಬಿ) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,
(ಸಿ) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ,
(ಡಿ) ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು
(ಇ) ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಬೆಂಗಳೂರು ಸಂಸ್ಥೆಗಳಲ್ಲಿ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 17-04-2023 ರಿಂದ ಕೊನೆಯ ದಿನಾಂಕ 17-05-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 21,400 - 97,100/- ರೂಗಳವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments