ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ 670 ಸಹಾಯಕ ವ್ಯವಸ್ಥಾಪಕರು, ಕಿರಿಯ ಸಹಾಯಕ, ಮಾರಾಟ ಪ್ರತಿನಿಧಿ, ಲೆಕ್ಕ ಗುಮಾಸ್ತರು, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 22-07-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 07-08-2023 ವರೆಗೆ ವಿಸ್ತರಿಸಲಾಗಿದೆ.
- ಹುದ್ದೆಗಳ ವಿವರ : 670
- ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು : 26
- ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ ನಲ್ಲಿ: 72
- ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ :186
- ಕರ್ನಾಟಕ ರಾಜ್ಯ ಆಹಾರ & ನಾಗರಿಕ ಸರಬರಾಜು ನಿಗಮ: 386
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಮತ್ತು ಇತರ ಪ್ರವರ್ಗಗಳ ಅಭ್ಯರ್ಥಿಗಳಿಗೆ ರೂ 1000/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 750/-
* ಅಂಗವಿಕಲ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 52,650 /- ರೂ ಗಳಿಂದ 97,100/- ರೂಗಳ ವರೆಗೆ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments