KEA ಯಿಂದ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ 26 ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22-07-2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 26
ಬ್ಯಾಕ್ ಲಾಗ್ ಹುದ್ದೆಗಳು : 10
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು : 6
ಉಳಿಕೆ ಮೂಲ ವೃಂದದ ಹುದ್ದೆಗಳು : 10
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 22-07-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 07-08-2023 ವರೆಗೆ ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುEngineering/ ಯಾವುದೇ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆ ಮತ್ತು ಇತರ ಪ್ರವರ್ಗಗಳ ಅಭ್ಯರ್ಥಿಗಳಿಗೆ ರೂ 1000/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 750/-
* ಅಂಗವಿಕಲ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ27,650 /- ರೂ ಗಳಿಂದ 97,100/- ರೂಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments