ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ವಿದ್ಯುಚ್ಛಕ್ತಿ ಲೋಕಪಾಲಕರು ಹುದ್ದೆಗಳ ನೇಮಕಾತಿ | ಕೂಡಲೆ ಅರ್ಜಿ ಸಲ್ಲಿಸಿ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗವು (KERC) ಒಂದು ಸ್ವತಂತ್ರ ನಿಯಂತ್ರಣ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ ವಿದ್ಯುಚ್ಛಕ್ತಿ ಲೋಕಪಾಲಕರು ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಕೊನೆಯ ದಿನಾಂಕದೊಳಗಾಗಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
- ಅರ್ಜಿಗಳನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಛೇರಿಯಲ್ಲಿ ಅಥವಾ https://kerc.karnataka.gov.in ವೆಬ್ ಸೈಟ್ ನಿಂದ ಅರ್ಜಿಯನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಕಾರ್ಯದರ್ಶಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಇವರ ಹೆಸರಿಗೆ ಪಡೆದ ರೂ. 1000/- ಗಳ ಡಿಮ್ಯಾಂಡ್ ಡ್ರಾಫ್ಟ್ ನ್ನು (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ರೂ. 100/- ಗಳು) ಹಾಗೂ ಹುದ್ದೆಗೆ ಸಂಬಂಧಪಟ್ಟ ಅರ್ಹತಾ ಪತ್ರಗಳ ಪ್ರತಿಗಳೊಂದಿಗೆ ದಿನಾಂಕ: 31-07-2024 ರಂದು ಅಥವಾ ಇದಕ್ಕೆ ಮುಂಚಿತವಾಗಿ ಈ ಕೆಳಗಿನ ವಿಳಾಸಕ್ಕೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ
ನಂ.16 ಸಿ-1, ವಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯಾ
ವಸಂತನಗರ, ಬೆಂಗಾಲರು-560052.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 80000/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ಕ ಮಾಡುವ ಮೂಲಕ ಸವಿವರವಾದ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.




Comments