Loading..!

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ 108 ಕಾರ್ಯನಿರ್ವಾಹಕ ಮತ್ತು ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
| Date:29 ಡಿಸೆಂಬರ್ 2019
not found
ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಅಡಿಯಲ್ಲಿ ಬರುವ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ಸುಮಾರು 108 ಕಾರ್ಯನಿರ್ವಾಹಕ ಮತ್ತು ಸಹಾಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕ ಜನವರಿ 19,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
Application Start Date:  27 ಡಿಸೆಂಬರ್ 2019
Selection Procedure: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗನುಗುಣವಾಗಿ ಪದವಿ,ಸ್ನಾತಕೋತ್ತರ ಪದವಿ,ಇಂಜಿನಿಯರಿಂಗ್ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಈ ಕುರಿತು ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕ 1000/-ರೂ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ
Age Limit: ಹುದ್ದೆಗಳಿಗನುಸಾರ ಗರಿಷ್ಟ 27 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯಿದ್ದು ಈ ಕುರಿತ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ಆ ಮೂಲಕ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಕೊನೆಯ ದಿನಾಂಕ ಜನವರಿ 19,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
to download official original notification Khadi and Village Industries Commission Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments