ಕುದುರೆ ಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಿನಿರತ್ನ ಕಂಪನಿಗಳಲ್ಲಿ ಒಂದಾಗಿರುವ ಕುದುರೆ ಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್, ನಲ್ಲಿ ಖಾಲಿ ಇರುವ35 ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ:
ಮೆಕ್ಯಾನಿಕಲ್ : 11
ಮೆಟಾಲರ್ಜಿ : 03
ಇಲೆಕ್ಟ್ರಿಕಲ್/ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ : 11
ಇನ್‌ಸ್ಟ್ರುಮೆಂಟೇಷನ್ ಮತ್ತು ಕಂಟ್ರೊಲ್ / ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯೂನಿಕೇಷನ್ : 4
ಸಿವಿಲ್ : 2
ಮೈನಿಂಗ್ : 2
ಕಂಪ್ಯೂಟರ್ ಸೈನ್ಸ್ : 2
ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಸ್ಕೋರ್ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 2017 ರಿಂದ 2021 ರ ನಡುವೆ ಇಂಜಿನಿಯರ್ ಪದವಿಯನ್ನು ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 31-07-2022 ಕ್ಕೆ ಗರಿಷ್ಠ 27 ವರ್ಷ ಗಳ ವಯೋಮಿತಿಯನ್ನು ಮೀರಿರಬಾರದು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.40,000 -1,40,000/ - ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments