ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವಎಲೆಕ್ಟ್ರಿಕಲ್ ಇಂಜಿನಿಯರ್, ಇನ್ ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರ್, ಇನ್ ಸ್ಟ್ರುಮೆಂಟೇಷನ್ ಆಂಡ್ ಕಂಟ್ರೋಲ್ ಇಂಜಿನಿಯರ್ ಹುದ್ದೆಗಳಿಗೆ ದಿನಾಂಕ 11/04/2022 ರಂದು ಬೆಳ್ಳಿಗೆ 09:30 ಘಂಟೆಗೆ ಮತ್ತು ಮೆಕ್ಯಾನಿಕಲ್ ಇಂಜಿನಿಯರ್, ಅಸಿಸ್ಟೆಂಟ್ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ದಿನಾಂಕ 12/04/2022 ರಂದು ಬೆಳ್ಳಿಗೆ 09:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್,
2ನೇ ಬ್ಲಾಕ್, ಕೊರಮಂಡಲ,
ಬೆಂಗಳೂರು-560034.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ, ವೃತ್ತಿಅನುಭವ ಮತ್ತು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 28/02/2022ರ ಅನ್ವಯ ಗರಿಷ್ಟ 32 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ರಿಂದ 1,12,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments