ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 315 ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಗೆ ಅವಕಾಶ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (KKRTC) ಖಾಲಿ ಇರುವ 315 ಸಹಾಯಕ ಲೆಕ್ಕಿಗ ಮತ್ತು ನಿರ್ವಾಹಕ (ಕಂಡಕ್ಟರ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸುವ ಅವಕಾಶ ಇದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಮೂರು ವರ್ಷ ಬ್ಯಾಚುಲರ್ ಡಿಗ್ರಿ ಪಾಸಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 38 ವರ್ಷ ವಯೋಮಿತಿಗಳನ್ನು ಮೀರಿರಬಾರದು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ 43 ವರ್ಷ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 41 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಯಮಾನುಸಾರವಾಗಿ ಹುದ್ದೆಗಳಿಗೆ ಅನುಗುಣವಾಗುವಂತೆ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments