Loading..!

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ವರದಿಗಾರರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:20 ಎಪ್ರಿಲ್ 2024
not found

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ 06 ಕನ್ನಡ ವರದಿಗಾರರುಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ :30-ಏಪ್ರಿಲ್-2024 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಅರ್ಜಿ ಸಲ್ಲಿಸುವ ವಿಳಾಸ : 
ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ
ಅಂಚೆ ಪೆಟ್ಟಿಗೆ ಸಂಖ್ಯೆ. 5074
1 ನೇ ಮಹಡಿ, ವಿಧಾನ ಸೌಧ
ಬೆಂಗಳೂರು - 560001


ಹುದ್ದೆಗಳ ವಿವರ : 06 
ಕನ್ನಡ ರಿಪೋರ್ಟರ್- 5
ಇಂಗ್ಲಿಷ್ ರಿಪೋರ್ಟರ್- 1

No. of posts:  6
Application Start Date:  19 ಎಪ್ರಿಲ್ 2024
Application End Date:  30 ಎಪ್ರಿಲ್ 2024
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮತ್ತು ಯಾವುದೇ ಅಂಗೀಕೃತ ಸಂಸ್ಥೆ /ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ.500/-ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಈ ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು-560001,ಈ ವಿಳಾಸಕ್ಕೆ ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಒಮ್ಮೆ ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಹೊಂದಿರಬೇಕು 
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ 
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments