ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ 37 ವರದಿಗಾರ, ಚಾಲಕ, ಕಂಪ್ಯೂಟರ್ ಆಪರೇಟರ್, ದಲಾಯತ್, ಸ್ವೀಪರ್, ಜೂನಿಯರ್ ಪ್ರೋಗ್ರಾಮರ್, ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೊನೆಯ ದಿನಾಂಕ 25 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ-
ಕಾರ್ಯದರ್ಶಿ, ಕರ್ನಾಟಕ ವಿಧಾನ ಸಭೆ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ,
ವಿಧಾನ ಸೌಧ, ಬೆಂಗಳೂರು-560 001.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮತ್ತು ಯಾವುದೇ ಅಂಗೀಕೃತ ಸಂಸ್ಥೆ /ವಿಶ್ವವಿದ್ಯಾಲಯದಿಂದ 04th, 07th, 10th, B.Sc, BCA, ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ.500/-ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಈ ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು-560001,ಈ ವಿಳಾಸಕ್ಕೆ ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಒಮ್ಮೆ ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಹೊಂದಿರಬೇಕು
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments