ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವಸಿಸ್ಟಮ್ ವಿಶ್ಲೇಷಕ, ಸಾಫ್ಟ್‌ವೇರ್ ಡೆವಲಪರ್ ಮತ್ತು SBPAS ಸಹಾಯ ಕೇಂದ್ರ ಹುದ್ದೆಗಳನ್ನು 1 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ24 ಜನವರಿ ಅಥವಾ 1 ಫೆಬ್ರವರಿ 2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿಮಾಡಿ ಸಂಬಂದಿಸಿದ ಎಲ್ಲಾ ಮೂಲ ದಾಖಲಾತಿ ಹಾಗೂ ಒಂದು ಪ್ರತಿ ಜೆರಾಕ್ಸ್ ನೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಕಾರ್ಯದರ್ಶಿ, ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ,
#1-4, 6ನೇ ಹಂತ ಐಟಿ ಪಾರ್ಕ್, ರಾಜಾಜಿನಗರ,
ಇಂಡಸ್ಟ್ರಿಯಲ್ ಸೊಸೈಟಿ, ಬೆಂಗಳೂರು-560010
ಹುದ್ದೆಗಳ ವಿವರ : 7
System Analyst: 01
Software Developer: 04
SBPAS Help Desk: 02
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.E or B.Tech, MCA, M.Tech, Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ Rs.49000-123000/- ರುಗಳವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments