ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ (KOF) ಹುಬ್ಬಳ್ಳಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:15 ಎಪ್ರಿಲ್ 2021

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿ., ಹುಬ್ಬಳ್ಳಿ ಇದರಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದುದಾಗಿದೆ.
* ಹುದ್ದೆಗಳ ವಿವರ :
- ಸಾಮಾನ್ಯ ಕೆಲಸಗಾರ - 04
- ಚಾಲಕ - 01
- ಸಹಾಯಕ ಮಾರಾಟಾಧಿಕಾರಿ -04
- ಸಹಾಯಕ ಲೆಕ್ಕಾಧಿಕಾರಿ - 03
- ಸಹಾಯಕ ಆಡಳಿತಾಧಿಕಾರಿ - 01
- ಕ್ಷೇತ್ರಾಧಿಕಾರಿ - 02
ದಿನಾಂಕ 08-05-2021 ರೊಳಗಾಗಿ "ವ್ಯವಸ್ಥಾಪಕ ನಿರ್ದೇಶಕರು, ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿಯಮಿತ ಹೆಬ್ಬಳ್ಳಿ ರಸ್ತೆ, ತಾಜನಗರ, ಹುಬ್ಬಳ್ಳಿ-580 031" ಇಲ್ಲಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
No. of posts: 15
Application Start Date: 14 ಎಪ್ರಿಲ್ 2021
Application End Date: 8 ಮೇ 2021
Qualification:
- ಸಾಮಾನ್ಯ ಕೆಲಸಗಾರ - ಎಸ್.ಎಸ್.ಎಲ್. ಸಿ. ಪಾಸಾಗಿರಬೇಕು
- ಚಾಲಕ - ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು ಹಾಗೂ ಲಘು ಮತ್ತು ಭಾರಿ ವಾಹನ ಚಾಲನೆ ಪರವಾನಗಿ ಹೊಂದಿರತಕ್ಕದ್ದು.
- ಸಹಾಯಕ ಮಾರಾಟಾಧಿಕಾರಿ - ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪಡೆದ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಹಾಗೂ ಎಂಬಿಎ ಮಾರುಕಟ್ಟೆ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
- ಸಹಾಯಕ ಲೆಕ್ಕಾಧಿಕಾರಿ - ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿ ಕಾಂ ಪದವಿ ಜೊತೆಗೆ ಟ್ಯಾಲಿ ಅಕೌಂಟಿಂಗ್ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಸಹಾಯಕ ಆಡಳಿತಾಧಿಕಾರಿ - ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಹಾಗೂ ಕಾನೂನು ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು
- ಕ್ಷೇತ್ರಾಧಿಕಾರಿ - ಅಂಗೀಕೃತ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹೊಂದಿರಬೇಕು.
Fee:
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ - 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ : 500 ರೂ ಮತ್ತು ಬ್ಯಾಂಕ್ ಶುಲ್ಕ ಪ್ರತ್ಯೇಕ
- ಇತರೆ ಎಲ್ಲ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 1000 ರೂ ಮತ್ತು ಬ್ಯಾಂಕ್ ಶುಲ್ಕ ಪ್ರತ್ಯೇಕ
Age Limit:
- ಸಾಮಾನ್ಯ ವರ್ಗ : ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು, ಗರಿಷ್ಟ 35 ವರ್ಷ ವಯಸ್ಸನ್ನು ಮೀರಿರಬಾರದು.
- ಪ್ರವರ್ಗ 2ಎ, ಪ್ರವರ್ಗ 2ಬಿ, ಪ್ರವರ್ಗ 3ಎ, ಪ್ರವರ್ಗ 3ಬಿ : ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು, ಗರಿಷ್ಟ 38 ವರ್ಷ ವಯಸ್ಸನ್ನು ಮೀರಿರಬಾರದು
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 : ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು, ಗರಿಷ್ಟ 40 ವರ್ಷ ವಯಸ್ಸನ್ನು ಮೀರಿರಬಾರದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments