ಕೊಂಕಣ ರೈಲ್ವೆ ನಿಗಮ ನಿಯಮಿತದಲ್ಲಿ 139 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ದಲ್ಲಿ 2021ನೇ ಸಾಲಿಗೆ 139 ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್‌ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ22-10-2021 ರಿಂದ 22-11-2021 ರ ಸಂಜೆ 05:00 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಬಂದಂತ ಅರ್ಜಿಯನ್ನು Shortlist ಮಾಡಲಾಗುವುದು. ನಂತರ Written Examination, Group discussion, Physical Examination ಮತ್ತು Direct interview ಮೂಲಕ ಆಯ್ಕೆ ಮಾಡಲಾಗುತ್ತದೆ.
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
General ಅಭ್ಯರ್ಥಿಗಳಿಗೆ 100/-ರೂಗಳು
SC/ ST/ Female/ Disabled/ Financially Disadvantaged ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-10-2021 ರ ಅನ್ವಯ ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು.
General ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು.
OBC ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 28 ವರ್ಷಗಳ ವಯೋಮಿತಿಯೊಳಗಿರಬೇಕು.
SC/ST ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷಗಳ ವಯೋಮಿತಿಯೊಳಗಿರಬೇಕು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ





Comments