ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ರೈಲ್ವೆಯ ಸಚಿವಾಲಯದ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಇಲ್ಲಿ ಖಾಲಿ ಇರುವ 190 ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಿಕ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಮೆಕ್ಯಾನಿಕ್ ಎಂಜಿನಿಯರಿಂಗ್, ಮತ್ತು ಡಿಪ್ಲೋಮ (ಮೆಕ್ಯಾನಿಕಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಾಖಲೆಯ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ನವೆಂಬರ್ 02, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 190
Civil Engineering: 30
Electrical Engineering: 20
Electronics Engineering: 10
Mechanical Engineering: 20
Diploma (Civil): 30
Diploma (Electrical): 20
Diploma (Electronics): 10
Diploma (Mechanical): 20
General Stream Graduates: 30
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೋಮ/ ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments