ಕೊಪ್ಪಳ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಮೇಲ್ವಿಚಾರಕರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದವರ ಪೈಕಿ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಗಳು ಲಭ್ಯವಾಗದಿದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯ ಇತರ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್,
ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್, ಕೊಪ್ಪಳ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments