ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (KPCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ

ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (KPCL) ನಲ್ಲಿ ಖಾಲಿ ಇರುವ 2 ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ 25 ಆಗಸ್ಟ್ 2023 ರೊಳಗೆ, ಹಾಗೂ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳಿಗೆ 19 ಸೆಪ್ಟೆಂಬರ್ 2023 ರೊಳಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗೆ 60 ರಿಂದ 70 ವರ್ಷದೊಳಗಿನವರು
ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ 40 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,000-/ ರೂ ಗಳಿಂದ 65,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments