ಕರ್ನಾಟಕ ಲೋಕಸೇವಾ ಆಯೋಗದಿಂದ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ
Published by: Basavaraj Halli | Date:6 ಅಕ್ಟೋಬರ್ 2022

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಒಟ್ಟು 13 ಆರ್ಥಿಕ ಹಾಗೂ ಸಾಂಖ್ಯಿಕ ನಿರ್ದೇಶನಾಲದಲ್ಲಿನ ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 07/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 05/11/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
No. of posts: 13
Application Start Date: 7 ಅಕ್ಟೋಬರ್ 2022
Application End Date: 5 ನವೆಂಬರ್ 2022
Last Date for Payment: 7 ನವೆಂಬರ್ 2022
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ PUC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400 - 42,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download the Official Notification : KPSC Data Entry Operator (Group-C) Posts Recruitment 2022
To Download the Official Notification : KPSC Data Entry Operator (Group-C) Posts Recruitment 2022

Comments