KPSC ಯಿಂದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಒಟ್ಟು 242 ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
Published by: Basavaraj Halli | Date:26 ಮಾರ್ಚ್ 2023

ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯದ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಒಟ್ಟು 242 ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ.
No. of posts: 242
Application Start Date: 23 ಮಾರ್ಚ್ 2023
Application End Date: 23 ಎಪ್ರಿಲ್ 2023
Last Date for Payment: 24 ಎಪ್ರಿಲ್ 2023
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Com or B.B.M or B.B.A ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.27,650 - 52,650/- ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments