ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗವು ಹೈದರಾಬಾದ್ - ಕರ್ನಾಟಕ ವೃಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ5 ಸಹಾಯಕ ಸಾoಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 01/08/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 13/09/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಪ್ರಾರಂಭಿಕ ದಿನಾಂಕ: 01-08-2022
- ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 13-09-2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 14-09-2022
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37900-70850/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments