Loading..!

ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Tags: Degree
Published by: Yallamma G | Date:28 ಜುಲೈ 2023
not found

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ4 ಜೂನಿಯರ್ ಪ್ರೋಗ್ರಾಮರ್, ಡಾಟಾಬೇಸ್ ಅಡ್ಮಿನ್ ಮತ್ತು ನೆಟ್ ವರ್ಕ್ ಅಡ್ಮಿನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮತ್ತು ಹಾರ್ಡ್ ವೇರ್ ಟೆಕ್ನಿಷಿಯನ್ ಹುದ್ದೆಯನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/07/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಅರ್ಜಿ ಸಲ್ಲಿಸುವ ವಿಳಾಸ : 
ಕೊನೆಯ ದಿನಾಂಕದೊಳಗಾಗಿ “To be opened by Secretary only” ಎಂದು ನಮೂದಿಸಿದ ಮುಚ್ಚಿದ ಲಕೋಟೆಯಲ್ಲಿ, ಶ್ರೀ ಸುರಸ್ಕರ್ ವಿಕಾಸ್ ಕಿಶೋರ್,ಭಾ.ಆ.ಸೇ., ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001 ಇವರಿಗೆ ರವಾನಿಸತಕ್ಕದ್ದು.

ಹುದ್ದೆಗಳ ವಿವರ : 4
- Junior Programmer : 1
- Data Base Admin : 1
- Network Admin : 1
- Hardware Technician : 1

No. of posts:  4
Application Start Date:  27 ಜುಲೈ 2023
Application End Date:  31 ಜುಲೈ 2023
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ/ M.SC/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments