ಕರ್ನಾಟಕ ಲೋಕಸೇವಾ ಆಯೋಗದಿಂದ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗವು ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಗ್ರೂಪ್ 'ಎ' ವೃಂದದ ವಿವಿಧ ವಿಭಾಗಗಳಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಹುದ್ದೆಗಳ ವಿವರ:
ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ
* ವಿಷವಿಜ್ಞಾನ ವಿಭಾಗ - 02 & ಹೈ.ಕ - 01
* ಜೀವಶಾಸ್ತ್ರ ವಿಭಾಗ - 02
* ಡಿಎನ್ ಎ ವಿಭಾಗ - 01
* ರಸಾಯನಿಕ ವಿಭಾಗ - 02
* ಪ್ರಶ್ನಿತ ದಸ್ತಾವೇಜು ವಿಭಾಗ - 01
ಒಟ್ಟು ಹುದ್ದೆಗಳು : 10
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ನೇರಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
* ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹600/-
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50/-
* SC / ST, CAT-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇಂದ ವಿನಾಯಿತಿ ಇರುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.





Comments