KPSCಯಿಂದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 945 (ಹೈದ್ರಾಬಾದ್-ಕರ್ನಾಟಕ ವೃಂದ 273 ಮತ್ತು ಉಳಿಕೆ ಮೂಲ ವೃಂದ - 672) ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಸರ್ಕಾರವು ದಿನಾಂಕ: 18-09-2024ರಂದು ಜಾರಿ ಮಾಡಿದ್ದ ಕ್ರೀಡಾ ಸಾಧಕ ಅಭ್ಯರ್ಥಿಗಳ ಮೀಸಲಾತಿಯನ್ನು ಸದರಿ ಹುದ್ದೆಗಳಿಗೂ ಅಳವಡಿಸಿಕೊಳ್ಳಬೇಕಾದ್ದರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆಯನ್ನು ಮುಂದೂಡಲಾಗಿರುತ್ತದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 945 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 01 ಫೆಬ್ರುವರಿ 2025 ಎಂದು ನಿಗದಿಪಡಿಸಲಾಗಿತ್ತು. ಇದೀಗ KPSCಯು ಅರ್ಜಿ ಸಲ್ಲಿಸುವ ದಿನಾಂಕವನ್ನು 15/02/2025 ರ ತನಕ ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 945
ಕೃಷಿ ಅಧಿಕಾರಿಗಳು : 128 ಹುದ್ದೆಗಳು
ಸಹಾಯಕ ಕೃಷಿ ಅಧಿಕಾರಿಗಳು : 817 ಹುದ್ದೆಗಳು
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೃಷಿಯಲ್ಲಿ B.Sc/ B.TECH ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಗಳನ್ನು ಈ ಕೆಳಗಿನಂತಿವೆ.
ವಯೋಮಿತಿ ಸಡಿಲಿಕೆ:
ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯಸ್ಸು : 38 ವರ್ಷಗಳು
ವರ್ಗ 2A, 2B, 3A, ಮತ್ತು 3B ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು : 41
SC/ST ಮತ್ತು ವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು : 43
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುವದು. -
- ಕೃಷಿ ಅಧಿಕಾರಿ : 43,100/- 83,900/-
- ಸಹಾಯಕ ಕೃಷಿ ಅಧಿಕಾರಿ : 40,900/- 78,200/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments