ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖಿಕ ಇಲಾಖೆಯಲ್ಲಿ ಖಾಲಿ ಇರುವ 180 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಖಾಲಿ ಇರುವ 180 ಸಾಂಖ್ಯಿಕ ನಿರೀಕ್ಷಕರು ಮತ್ತು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
* ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಾಂಖ್ಯಿಕ ನಿರೀಕ್ಷಕರು ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 17/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 15/11/2022 ಕ್ಕೆ ಕೊನೆಗೊಳ್ಳಲಿದೆ.
* ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಾಂಖ್ಯಿಕ ನಿರೀಕ್ಷಕರು ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 19/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 17/11/2022 ಕ್ಕೆ ಕೊನೆಗೊಳ್ಳಲಿದೆ.
* ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕ 20/10/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 18/11/2022 ಕ್ಕೆ ಕೊನೆಗೊಳ್ಳಲಿದೆ.
ಹುದ್ದೆಗಳ ವಿವರ : 180
* ಸಾಂಖ್ಯಿಕ ನಿರೀಕ್ಷಕರು (ಹೈದರಾಬಾದ್ ಕರ್ನಾಟಕ ವೃಂದ) : 17
* ಸಾಂಖ್ಯಿಕ ನಿರೀಕ್ಷಕರು (ಉಳಿಕೆ ಮೂಲ ವೃಂದ) : 105
* ಸಹಾಯಕ ಸಾಂಖ್ಯಿಕ ಅಧಿಕಾರಿ : 58
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Download Official Notifications :
STATISTICAL INSPECTOR [HK] IN THE DIRECTORATE OF ECONOMICS & STATISTICS
STATISTICAL INSPECTOR [RPC] IN THE DIRECTORATE OF ECONOMICS & STATISTICS
ASSISTANT STATISTICAL OFFICER [RPC] IN THE DIRECTORATE OF ECONOMICS & STATISTICS





Comments