Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ
Published by: Yallamma G | Date:6 ಅಕ್ಟೋಬರ್ 2022
not found

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಗ್ರೂಪ್ - ಬಿ ವೃಂದದ ಮೀನುಗಾರಿಕೆ ಇಲಾಖೆಯಲ್ಲಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 20/09/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 19/10/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 

ಸೂಚನೆ : ದಿನಾಂಕ 3 ಅಕ್ಟೋಬರ್ 2022 ರಂದು ಈ ನೇಮಕಾತಿಯ ತಿದ್ದುಪಡೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಪರಿಷ್ಕೃತ ಅಧಿಸೂಚನೆಯಲ್ಲಿ 3 ಹುದ್ದೆಗಳನ್ನು ಹೆಚ್ಚುವರಿಯಾಗಿ ಸೇರ್ಪಡೆಗೊಳಿಸಲಾಗಿದೆ.

No. of posts:  8
Application Start Date:  20 ಸೆಪ್ಟೆಂಬರ್ 2022
Application End Date:  19 ಅಕ್ಟೋಬರ್ 2022
Last Date for Payment:  20 ಅಕ್ಟೋಬರ್ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.F.Sc ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/- 
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/- 
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,900-78,200/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಪರಿಷ್ಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
To Download Official Notification of KPSC Recruitment in Dept Of Fisheries 2022

Comments