ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಮತ್ತು ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಸಹಾಯಕ ಕಾರ್ಯಪಾಲ ಅಭಿಯಂತರರು ಮತ್ತು ರೇಷ್ಮೆ ಇಲಾಖೆಯಲ್ಲಿ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 17/09/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 17/10/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 31
* ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ : 25
* ರೇಷ್ಮೆ ಇಲಾಖೆ : 06
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
SERICULTURE EXTENSION OFFICER IN SERICULTURE DEPARTMENT [HK]
ASSISTANT EXECUTIVE ENGINEER IN THE DEPARTMENT RURAL DRINKING WATER & SANITIZATION [RPC]
ASSISTANT EXECUTIVE ENGINEER IN THE DEPARTMENT RURAL DRINKING WATER & SANITIZATION [HK]





Comments