ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ 2975 ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | ಈ ಕುರಿತ ವಿವರ ನಿಮಗಾಗಿ

ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಪೂರೈಸುತ್ತಿರುವ ಸರ್ಕಾರಿ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ2975 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಸಹನ ಶಕ್ತಿ ಪರೀಕ್ಷೆ ಮತ್ತು ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಪ್ರಮುಖದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 21/10/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/11/2024
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25/11/2024
ಹುದ್ದೆಗಳ ವಿವರ : 2975
ಕಿರಿಯ ಸ್ಟೇಷನ್ ಪರಿಚಾರಕ : 433
ಕಿರಿಯ ಪವರ್ ಮ್ಯಾನ್ : 2542
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಸಾಮಾನ್ಯ/ ಪ್ರವರ್ಗ-2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳು : ರೂ. 614/- (ಸರಕು ಮತ್ತು ಸೇವಾ ತೆರಿಗೆ ಹಾಗೂ ಅಂಚೆ ಸೇವಾ ಶುಲ್ಕ ಒಳಗೊಂಡಂತೆ).:
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳು : ರೂ. 378/- (ಸರಕು ಮತ್ತು ಸೇವಾ ತೆರಿಗೆ ಹಾಗೂ ಅಂಚೆ ಸೇವಾ ಶುಲ್ಕ ಒಳಗೊಂಡಂತೆ).
* ವಿಕಲಚೇತನ ಅಭ್ಯರ್ಥಿಗಳು : ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ (ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ): 18 ವರ್ಷಗಳು
ಗರಿಷ್ಠ ವಯೋಮಿತಿ :
- ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷಗಳು
- ಪ್ರವರ್ಗ-1, 2(ಎ), 2(ಬಿ), 3(ಎ) ಮತ್ತು 3(ಬಿ) ಗೆ ಸೇರಿದ ಅಭ್ಯರ್ಥಿಗಳು : 38 ವರ್ಷಗಳು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ -1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಾಸಿಕ ಈ ಕೆಳಗಿನಂತೆ ವೇತನ ಪಡೆಯಲಿದ್ದಾರೆ.
1ನೇ ವರ್ಷ: ರೂ. 17,000/-
2ನೇ ವರ್ಷ: ರೂ. 19,000/-
3ನೇ ವರ್ಷ: ರೂ. 21,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments