ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯ ಬೆಳಗಾವಿ ಜಿಲ್ಲಾ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಖಾಲಿ ಇರುವ ಜೂನಿಯರ್ ಮೈಕ್ರೋಬಯೋಲಜಿಸ್ಟ್ ಮತ್ತು ಮೈಕ್ರೋಬಯೋಲಜಿ ಲ್ಯಾಬ್ ಅಟೆಂಡರ್/ ಹೌಸ್ ಕೀಪಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಜೂನಿಯರ್ ಮೈಕ್ರೋಬಯೋಲಜಿಸ್ಟ್ ಮತ್ತು ಮೈಕ್ರೋಬಯೋಲಜಿ ಲ್ಯಾಬ್ ಅಟೆಂಡರ್/ ಹೌಸ್ ಕೀಪಿಂಗ್ ಹುದ್ದೆಗಳನ್ನು ಒಂದು ವರ್ಷ ಅವಧಿಯವರೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02/07/2024 ಸಾಯಂಕಾಲ 05:00 ಯೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸವ ವಿಳಾಸ :
ಕಾರ್ಯ ಪಾಲಕ ಅಭಿಯಂತರರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ
ವಿಭಾಗ, ಬೆಳಗಾವಿ-590010.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 13,000/- ರೂಗಳಿಂದ 20,000/- ರೂವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments