ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಒಪ್ಪಂದದ ಆಧಾರದ ಮೇಲೆ ಖಾಲಿ ಇರುವ ಅಭಿಯಂತರರು ಮತ್ತು ಮಾಹಿತಿ ತಂತ್ರಜ್ಞಾನ ಸಲಹೆಗಾರರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ03/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಂಚೆ ಕಚೇರಿಯ ವಿಳಾಸ :
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ,
ಖನಿಜ ಭವನ, 4ನೇ ಮಹಡಿ, ಪೂರ್ವ ವಿಭಾಗ, ನಂ.49 ರೇಸ್ ಕೋರ್ಸ್ ರಸ್ತೆ, ಬೆಂಗಳೂರು -560001
ಹುದ್ದೆಗಳ ವಿವರ : 6
ಅಭಿಯಂತರರು : 5
ಮಾಹಿತಿ ತಂತ್ರಜ್ಞಾನ : 1
ಈ ಹುದ್ದೆಗೆ ನೇಮಕಾತಿ ನಿಯಮಾನುಸಾರ BE/ ME/ M.Tech/ MCA ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಕನಿಷ್ಠ ಐದು ವರ್ಷದ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 50,000/- ರಿಂದ 70,000/- ವರೆಗೆವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments