ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ದಡಿಯಲ್ಲಿ ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ 09 ಸಿವಿಲ್ ಎಂಜಿನಿಯರ್, ಎಲೆ ಕ್ಟ್ರಿಕಲ್ ಎಂಜಿನಿಯರಿಂಗ್ ಹೆಡ್, ಸಿವಿಲ್ ಎಂಜಿನಿಯರ್ ಹೆಡ್, ಟೆಕ್ನಿಷಿಯನ್ ಏರ್ ಸೈಡ್ ಆಪ್ರೇಷನಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಧಿಸೂಚನೆ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
ಈ ಹುದ್ದೆಗೆ ನೇಮಕಾತಿ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 40,000/- ರಿಂದ 1,25,000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments