Loading..!

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:3 ಫೆಬ್ರುವರಿ 2024
not found

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ದಡಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ 7 ಹುದ್ದೆಗಳಿಗೆ ಅರ್ಹ  ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ07/02/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಂಚೆ ಕಚೇರಿಯ ವಿಳಾಸ :
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ,
ಖನಿಜ ಭವನ, 4ನೇ ಮಹಡಿ, ಪೂರ್ವ ವಿಭಾಗ, ನಂ.49 ರೇಸ್ ಕೋರ್ಸ್ ರಸ್ತೆ, ಬೆಂಗಳೂರು -560001

ಈ ಹುದ್ದೆಗಳಿಗೆ ದಿನಾಂಕ 09/02/2024 ರಂದು  ಬೆಳಿಗ್ಗೆ 10:00 ಘಂಟೆಗೆ ಸಂದರ್ಶನವನ್ನು ಸಡೆಸಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.  

No. of posts:  7
Application Start Date:  3 ಫೆಬ್ರುವರಿ 2024
Application End Date:  7 ಫೆಬ್ರುವರಿ 2024
Work Location:  ಕರ್ನಾಟಕ
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Qualification:

ಈ ಹುದ್ದೆಗೆ ನೇಮಕಾತಿ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ ಐದು ವರ್ಷದ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು
Pay Scale:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 30,000/- ರಿಂದ 50,000/- ವರೆಗೆವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments