ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ನವನಗರ ಹುಬ್ಬಳಿಯಲ್ಲಿನ ಜಲಸಂಪನ್ಮೂಲ ನಿರ್ವಹಣೆ ಮತ್ತು ಕಾನೂನು, ಪ್ರಜಾಪ್ರಭುತ್ವ ಮತ್ತು ಸಂವಿಧಾನಾತ್ಮಕ ಸರ್ಕಾರ ಸಂಶೋಧನಾ ಕೇಂದ್ರಗಳು ಮತ್ತು ವಿಜ್ಞಾನೇಶ್ವರ ಅಧ್ಯಯನ ಪೀಠ ಇಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕರು ಮತ್ತು ಕಿರಿಯ ಸಂಶೋಧನಾ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ತುಂಬಿ ದಿನಾಂಕ:31 ಆಗಸ್ಟ್ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಕುಲಸಚಿವರು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ,
ನವನಗರ, ಹುಬ್ಬಳಿ-580025.
ಈ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ 30,000/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments