ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಭೂವಿಜ್ಞಾನಿ, ಅಸಿಸ್ಟಂಟ್ ಮ್ಯಾನೇಜರ್ (ಪ್ರೊಡಕ್ಷನ್), ಮೈನ್ ಸರ್ವೇಯರ್, ಎಲೆಕ್ರ್ಟಿಕಲ್ ಇಂಜಿನಿಯರ್, ಮೆಕ್ಯಾನಿಕಲ್ ಫೋರ್ ಮನ್ ಟೆಕ್ನಿಷಿಯನ್, ಮೈನ್ ಮೆಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 17/01/2023 ರಿಂದ 20/01/2023 ರೊಳಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.
- ಸಂದರ್ಶನದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
ಸಂದರ್ಶನ ನಡೆಯುವ ಸ್ಥಳ :
ಟಿಟಿಎಂಸಿ, ಎ ಬ್ಲಾಕ್, ಬಿ.ಎಂ.ಟಿ.ಸಿ.ಕಟ್ಟಡ,
ಕೆ.ಎಚ್.ರಸ್ತೆ, ಶಾಂತಿನಗರ, ಬೆಂಗಳೂರು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುITI/ ಡಿಪ್ಲೊಮಾ/ BE/ MBA/ Msc ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 23 ವರ್ಷ ಹಾಗೂ ಗರಿಷ್ಠ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 22,000/- ರಿಂದ 75,000/- ವರೆಗೆ ಗೌರವಧನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments