ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ
Published by: Basavaraj Halli | Date:6 ಡಿಸೆಂಬರ್ 2021

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಬೆಂಗಳೂರು ಇಲ್ಲಿ ಖಾಲಿ ಇರುವ ಕಾನೂನು ಸಲಹೆಗಾರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಡಿಸೆಂಬರ್ 14, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು, ಈ ಕೆಳಗೆ ನೀಡಿರುವ ಕಚೇರಿಯಾ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ತಲುಪುವಂತೆ ಸಲ್ಲಿಸಬೇಕು.
ಕಚೇರಿ ವಿಳಾಸ:
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ಮತ್ತು ಆಯುಕ್ತರು,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆರೋಗ್ಯ ಸೌಧ, ಮಾಗಡಿ ರಸ್ತೆ, ಬೆಂಗಳೂರು.
No. of posts: 1
Application Start Date: 6 ಡಿಸೆಂಬರ್ 2021
Selection Procedure: ಅಭ್ಯರ್ಥಿಗಳನ್ನು ಕಿರುಪಟ್ಟಿ(ShortList), ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ನೇಮಕಾತಿಯ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನು ಪದವಿ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
Age Limit: ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು
Pay Scale: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000/-ರೂ ವೇತನ ನಿಗದಿಪಡಿಸಲಾಗಿದೆ.

Comments