ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ FDA ಮತ್ತು SDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ಕಲ್ಯಾಣ ಕರ್ನಾಟಕ ವೃಂದದ ಹಾಗೂ ಸ್ಥಳೀಯ ವೃಂದದ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಸೇವಕ, ಬೆರಳಚ್ಚುಗಾರ ಮತ್ತು ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಮತ್ತು ಸ್ವೀಪರ್ ಸೇರಿದಂತೆ ವಿವಿಧ ಬೋಧಕೇತರ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಹುದ್ದೆಗಳ ವಿವರ : 32
ಗ್ರೂಪ್ ಸಿ ಹುದ್ದೆಗಳು : 21
ಗ್ರೂಪ್ ಡಿ ಹುದ್ದೆಗಳು : 11
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ30/09/2023ರ ಸಂಜೆ 4ಗಂಟೆಯೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ತಲುಪುವಂತೆ ಅಂಚೆ ಅಥವ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕುಲಸಚಿವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ,
ಮುಕ್ತಗಂಗೋತ್ರಿ, ಮೈಸೂರು-570006.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ರೂ 500/- ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನತ್ತೆ ನಿಗದಿಪಡಿಸಲಾಗಿದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳಿಗನುಗುಣವಾಗಿ ವಿವಿಧ ವೇತನ ಶ್ರೇಣಿ ನಿಗದಿಪಡಿಸಿದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆ ಗಮನಿಸಿ.
* ಈ ನೇಮಕಾತಿಯ ಕುರಿತು ಇನ್ನಷ್ಟು ಹೆಚ್ಚಿನ ವಿವರಗಳನ್ನು ಪಡೆಯಲು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪತ್ರಿಕಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿರುತ್ತದೆ.





Comments