ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ (Civil) ಪೊಲೀಸ್ ಕಾನ್ಸ್ ಟೇಬಲ್ ಒಟ್ಟು 1591 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1591 ನಾಗರೀಕ (Civil) ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 20 ಅಕ್ಟೋಬರ್ 2022 ರಿಂದ ಆರಂಭಗೊಂಡು ದಿನಾಂಕ 21 ನವೆಂಬರ್ 2022 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
* ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ) 683
* ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಮಹಿಳಾ) 229
* ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ) (ತೃತೀಯ ಲಿಂಗ) 22
* ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಮಹಿಳಾ) (ತೃತೀಯ ಲಿಂಗ) 10
* ಸೇವಾನಿರತ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ) 134
* ಸೇವಾನಿರತ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಮಹಿಳಾ) 57
* ಸೇವಾನಿರತ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ) (ತೃತೀಯ ಲಿಂಗ) 1
* ಸೇವಾನಿರತ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಮಹಿಳಾ) (ತೃತೀಯ ಲಿಂಗ) 1
ಕಲ್ಯಾಣ ಕರ್ನಾಟಕ ಮೀಸಲು ಹುದ್ದೆಗಳು : 454
ಒಟ್ಟು ಹುದ್ದೆಗಳು : 1591
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ ₹200 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 21.11.2022ಕ್ಕೆ ಅಭ್ಯರ್ಥಿಗೆ ಕನಿಷ್ಟ 19 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಪುರುಷ ಮತ್ತು ಮಹಿಳಾ ಮತ್ತು ತೃತೀಯ ಲಿಂಗ (ಪುರುಷ ಮತ್ತು ಮಹಿಳಾ) ಅಭ್ಯರ್ಥಿಗಳಿಗೆ:
i) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ii) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
iii) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
ಸೇವಾನಿರತ ಅಭ್ಯರ್ಥಿಗಳಿಗೆ :
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 21.11.2022 ಕ್ಕೆ ಅಭ್ಯರ್ಥಿಗೆ ಈ ಕೆಳಕಂಡ ವಯಸ್ಸು ಮೀರಿರಬಾರದು.
i) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 33 ವರ್ಷಗಳು.
ii) ಇತರೆ ಅಭ್ಯರ್ಥಿಗಳಿಗೆ 31 ವರ್ಷಗಳು.




Comments