Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 387 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (In-Service) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Basavaraj Halli | Date:6 ಸೆಪ್ಟೆಂಬರ್ 2021
not found
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ವಿವಿಧ ವಿಭಾಗಗಳ್ಲಲಿ ಸೇವೆ ಸಲ್ಲಿಸುತ್ತಿರುವ ಸೇವಾನಿರತ ಅಭ್ಯರ್ಥಿಗಳು ನಾಗರೀಕ ವಿಭಾಗದಲ್ಲಿ ಸೇವೆ ಸಲ್ಲಿಸಬಹುದಾದ ಸುವರ್ಣಾವಕಾಶ ಒದಗಿಬಂದಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 387 ಕಾನ್ಸ್ಟೇಬಲ್ (ಸೇವಾನಿರತ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 19 ಆಗಸ್ಟ್ 2021 ರ ಬೆಳಿಗ್ಗೆ ಹತ್ತು ಗಂಟೆಯಿಂದ ಆರಂಭಗೊಂಡು ದಿನಾಂಕ 13 ಸೆಪ್ಟೆಂಬರ್ 2021 ರಂದು ಕೊನೆಗೊಳ್ಳಲಿದೆ.

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
No. of posts:  387
Application Start Date:  19 ಆಗಸ್ಟ್ 2021
Application End Date:  13 ಸೆಪ್ಟೆಂಬರ್ 2021
Last Date for Payment:  15 ಸೆಪ್ಟೆಂಬರ್ 2021
Work Location:  ಕರ್ನಾಟಕ
Selection Procedure: ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ನಡೆಸಿ ನಂತರ 1:5 ರ ಅರ್ಹತೆ ಆಧಾರದ ಮೇಲೆ ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಈ ಕುರಿತು ವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.

* ತತ್ಸಮಾನ ವಿದ್ಯಾರ್ಹತೆಗಳು : 

1. ಸಿ.ಬಿ.ಎಸ್.ಇ ಮತ್ತು ಐ.ಎಸ್.ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.

2. ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.

3. ನ್ಯಾಷನಲ್ ಇನ್ಸ್‍ಸ್ಟಿಟೂಟ್ ಆಫ್ ಓಪನ್ ಸ್ಕೂಲಿಂಗ್(ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ಹೆಚ್.ಎಸ್.ಸಿ.

4. ಮೂರು ವರ್ಷಗಳ ಡಿಪ್ಲೊಮಾ ಆಥವಾ ಎರಡು ವರ್ಷಗಳ ಐ.ಟಿ.ಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ) ಅಭ್ಯರ್ಥಿಗಳು ಎನ್.ಐ.ಒ.ಎಸ್ ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿ.ಯು.ಸಿಗೆ ತತ್ಸಮಾನ.
Fee: ಸಾಮಾನ್ಯ ಅರ್ಹತೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 400 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 200 ಅರ್ಜಿಯ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 06/09/2021ಕ್ಕೆ ಅನ್ವಯಿಸುವಂತೆ ಕನಿಷ್ಟ 19 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು 

- ಸಾಮಾನ್ಯ ಅಭ್ಯರ್ಥಿಗಳಿಗೆ 31 ವರ್ಷ 

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ 33 ವರ್ಷ 

- ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 33 ವರ್ಷಗಳವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
To Download the Official Notification

Comments

Laxmikant Laxmikant ಆಗ. 21, 2021, 1:33 ಅಪರಾಹ್ನ
Asha D P ಆಗ. 26, 2021, 12:05 ಅಪರಾಹ್ನ