Loading..!

ರಾಜ್ಯ ಪೊಲೀಸ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ : ಒಟ್ಟು 16 FSL ಅಧಿಕಾರಿ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:27 ಜನವರಿ 2022
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಮಿಕ್ಕುಳಿದ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 16 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 30 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 31 ಜನವರಿ 2022
No. of posts:  16
Application Start Date:  30 ಡಿಸೆಂಬರ್ 2021
Application End Date:  28 ಜನವರಿ 2022
Last Date for Payment:  31 ಜನವರಿ 2022
Work Location:  ಕರ್ನಾಟಕ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಎರಡು ವರ್ಷ ಸಂಶೋಧನಾ ಅನುಭವ ಹೊಂದಿರಬೇಕು.

Fee:

ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 250 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35 ವರ್ಷ 
ಹಿಂದುಳಿದ ವರ್ಗ 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.

Pay Scale:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 40,900 ದಿಂದ ಆರಂಭಗೊಂಡು 78,200 ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.

- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download the Official Notification

Comments