ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಕೆಎಆರ್ಪಿ ಮೌಂಟೆಡ್ ಕಂಪನಿ ಮೈಸೂರು ಇಲ್ಲಿನ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ
Published by: Basavaraj Halli | Date:22 ಜೂನ್ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಆರ್ಪಿ ಮೌಂಟೆಡ್ ಕಂಪನಿ, ಮೈಸೂರು ಇಲ್ಲಿ ಖಾಲಿ ಇರುವ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
- ಅಭ್ಯರ್ಥಿಗಳು ಅರ್ಜಿಯನ್ನು "ಕಮಾಂಡೆಂಟ್ ಕೆಎಆರ್ಪಿ ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ ಮೈಸೂರು-570011" ಇವರ ಕಛೇರಿಗೆ ಖುದ್ದಾಗಿ ಅಥವಾ ಅಥವಾ ಅಂಚೆ ಮೂಲಕ ಕೊನೆಯ ದಿನಾಂಕದೊಳಗಾಗಿ ಕಚೇರಿಗೆ ತಲುಪಿಸಬಹುದಾಗಿದೆ
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಜೂನ್ 2021
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಜೂನ್ 2021 ರ ಸಂಜೆ 5 ಗಂಟೆ
Application Start Date: 1 ಜೂನ್ 2021
Application End Date: 25 ಜೂನ್ 2021
Work Location: ಮೈಸೂರು, ಕರ್ನಾಟಕ
Selection Procedure:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ಸಂದರ್ಶನ ನಂತರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ವಿದ್ಯಾರ್ಹತೆಯ ಕುರಿತು ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 250 ರೂಪಾಯಿ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ರ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 25/06/2021ಕ್ಕೆ ಅನ್ವಯಿಸುವಂತೆ ಕನಿಷ್ಟ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
₹ 23500-550-24600-600-27000-650-29600-750-32600-850-36000-950-39800-1100-46400-1250-47650
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಮಾಹಿತಿ ಪಡೆಯಬಹುದಾಗಿದೆ.




Comments